Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:29 - ಕನ್ನಡ ಸತ್ಯವೇದವು J.V. (BSI)

29 ದೇವರು ಸೊಲೊಮೋನನಿಗೆ ಸಮುದ್ರತೀರದ ಉಸುಬಿನಷ್ಟು ಅಪರಿವಿುತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:29
19 ತಿಳಿವುಗಳ ಹೋಲಿಕೆ  

ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಅವನು ದವಸಧಾನ್ಯವನ್ನು ಸಮುದ್ರದ ಉಸಬಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟು ಬಿಟ್ಟನು; ಅದನ್ನು ಲೆಕ್ಕ ಮಾಡುವದಕ್ಕೆ ಆಗದೆಹೋಯಿತು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.


ನಾನು ಮನಸ್ಸಿನಲ್ಲಿ ಯೋಚಿಸುತ್ತಾ - ಆಹಾ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ; ನನ್ನ ಹೃದಯವು ಜ್ಞಾನವನ್ನೂ ತಿಳುವಳಿಕೆಯನ್ನೂ ವಿಶೇಷವಾಗಿ ಹೊಂದಿದೆ ಎಂದುಕೊಂಡೆನು.


ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.


ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು