Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:11 - ಕನ್ನಡ ಸತ್ಯವೇದವು J.V. (BSI)

11 ಸೊಲೊಮೋನನಾದರೋ ಪ್ರತಿವರುಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೊಲೊಮೋನನಾದರೋ ಪ್ರತಿವರ್ಷ ಅವನ ಮನೆಯವರ ಆಹಾರಕ್ಕಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿಯನ್ನೂ ನಾಲ್ಕು ಸಾವಿರ ಲೀಟರ್ ಅಪ್ಪಟ ಎಣ್ಣೆಯನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:11
9 ತಿಳಿವುಗಳ ಹೋಲಿಕೆ  

ಮರಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ ಗೋದಿ, ಇಪ್ಪತ್ತು ಸಾವಿರ ಕೋರ್ ಜವೆಗೋದಿ, ಇಪ್ಪತ್ತು ಸಾವಿರ ಬತ್ ದ್ರಾಕ್ಷಾರಸ, ಇಪ್ಪತ್ತು ಸಾವಿರ ಬತ್ ಎಣ್ಣೆ ಇವುಗಳನ್ನು ಕೊಡುವೆನೆಂದು ಹೇಳಿಸಿದನು.


ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗುವ ಆಹಾರಪದಾರ್ಥಗಳು - ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆ ಗೋದಿಯ ಹಿಟ್ಟು,


ತೂರ್ ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವದನ್ನು ನೋಡಿ ಒಂದೇ ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಬೇಕೆಂದು ಅರಸನನ್ನು ಬೇಡಿಕೊಂಡರು. ಯಾಕಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.


ಜೆರಹನ ಮಕ್ಕಳು - ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ದಾರ; ಒಟ್ಟು ಐದು ಮಂದಿ.


ಮೆರಾರೀ ಸಂತಾನದವರು - ಇವನ ಮಗನು ಮಹ್ಲೀ; ಇವನ ಮಗನು ಲಿಬ್ನೀ; ಇವನ ಮಗನು ಶಿಮ್ಮೀ;


ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ವಿುಗಿಲಾಗಿದ್ದನು.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನಿನ್ನ ಸತ್ಯತೆಯನ್ನು ಮುಂದಣ ಸಂತಾನದವರೆಲ್ಲರಿಗೂ ನನ್ನ ಬಾಯಿ ತಿಳಿಯಮಾಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು