Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:17 - ಕನ್ನಡ ಸತ್ಯವೇದವು J.V. (BSI)

17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡಕಲ್ಲುಗಳನ್ನು ಕೊರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:17
10 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು.


ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟಂಥ ಎರಡು ಮಗ್ಗಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿದರು.


ಹೋಗಿ ನನ್ನ ಸೇವಕನಾದ ದಾವೀದನಿಗೆ - ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?


ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು; ಅವರು ನನ್ನ ಪಾದದ ಕೆಳಗೆ ಬೀಳುವರು.


ಆದರೆ ಯೆಹೋವನು ನನಗೆ - ನೀನು ಬಹಳ ರಕ್ತವನ್ನು ಸುರಿಸಿದವನೂ ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು