Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:4 - ಕನ್ನಡ ಸತ್ಯವೇದವು J.V. (BSI)

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:4
11 ತಿಳಿವುಗಳ ಹೋಲಿಕೆ  

ನಿನಗೆ ಒಬ್ಬ ಮಗನು ಹುಟ್ಟುವನು; ಅವನು ಸಮಾಧಾನಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಣಗಿಸಿ ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವದು. ಅವನ ಕಾಲದಲ್ಲಿ ಇಸ್ರಾಯೇಲ್ಯರಿಗೆ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಅವನ ದಿವಸಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ಹೋಗಿ ನನ್ನ ಸೇವಕನಾದ ದಾವೀದನಿಗೆ - ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?


ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;


ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವದಕ್ಕಾಗಿ ಬೇಕಾದ ಕಲ್ಲು ಮರಗಳನ್ನು ಸಿದ್ಧಪಡಿಸಿದವರು ಇವರೇ.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲ್ಯರಿಗೆ ಮಹಾಬಾಧಕನಾದ ಹದದನಲ್ಲದೆ ಇವನೂ ವೈರಿಯಾಗಿದ್ದನು. ಇವನು ಅರಾಮ್‍ದೇಶದಲ್ಲಿ ಆಳುವವನಾಗಿ ಇಸ್ರಾಯೇಲ್ಯರನ್ನು ಬಹಳವಾಗಿ ದ್ವೇಷಿಸಿದನು.


ಗಾಜಪ್ರಾಂತದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಬುರುಜಿರುವ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು