Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:7 - ಕನ್ನಡ ಸತ್ಯವೇದವು J.V. (BSI)

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:7
17 ತಿಳಿವುಗಳ ಹೋಲಿಕೆ  

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಧರ್ಮಿಯ ತಂದೆಯು ಅತಿ ಸಂತೋಷಪಡುವನು; ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.


ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಯೆರೂಸಲೇಮೇ, ನಾನು ನಿನ್ನನ್ನು ನೆನಸದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಎಂದು ಹೇಳಿದ್ದಾನೆ ಅಂದನು.


ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು.


ಆದದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರ ಕೊಯ್ಯುವದರಲ್ಲಿ ಜಾಣರು ನಮ್ಮಲ್ಲಿರುವದಿಲ್ಲವೆಂದು ನಿನಗೆ ಗೊತ್ತುಂಟಲ್ಲಾ ಎಂದು ಹೇಳಿಸಿದನು.


ಇದಲ್ಲದೆ ಅವನು ಸೊಲೊಮೋನನಿಗೆ - ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.


ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಮೇಲೆ ಹನ್ನೆರಡು ಮಂದಿ ಪ್ರದೇಶಾಧಿಪತಿಗಳನ್ನು ನೇವಿುಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಅವನ ಮನೆಯವರಿಗೂ ಬೇಕಾದ ಆಹಾರಪದಾರ್ಥಗಳನ್ನು ಪ್ರತಿವರುಷವೂ ಒದಗಿಸಿ ಕೊಡಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು