Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:1
26 ತಿಳಿವುಗಳ ಹೋಲಿಕೆ  

ಆದರೆ ಆತನಿಗೋಸ್ಕರ ಮನೆಯನ್ನು ಕಟ್ಟಿಸಿದವನು ಸೊಲೊಮೋನನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.


ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.


ಯಾಕಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.


ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.


ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?


ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಗೆ ಹೀಗೆ ಆಜ್ಞಾಪಿಸಿದನು. -


ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.


ಅವನು ಯೆಹೋವನಿಗೋಸ್ಕರ ಕಟ್ಟಿಸಿದ ದೇವಾಲಯದ ಉದ್ದವು ಅರುವತ್ತು ಮೊಳ; ಅಗಲವು ಇಪ್ಪತ್ತು ಮೊಳ; ಎತ್ತರವು ಮೂವತ್ತು ಮೊಳ.


ಯೋಹಾನಾನನು ಅಜರ್ಯನನ್ನು ಪಡೆದನು; ಸೊಲೊಮೋನನು ಕಟ್ಟಿಸಿದ ಯೆರೂಸಲೇವಿುನ ದೇವಾಲಯದಲ್ಲಿ ಯಾಜಕಸೇವೆಮಾಡುತ್ತಿದ್ದವನು ಇವನೇ.


ಅವರು ನಮಗೆ - ನಾವು ಪರಲೋಕ ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರುಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರಿಗಿ ಕಟ್ಟುತ್ತಿರುತ್ತೇವೆ. ಇಸ್ರಾಯೇಲ್ಯರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿ ತೀರಿಸಿದ್ದನು.


ಆತನು ತನ್ನ ಆಲಯವನ್ನು ಪರ್ವತದಂತೆಯೂ ತಾನು ಸ್ಥಾಪಿಸಿದ ಭೂವಿುಯಂತೆಯೂ ಶಾಶ್ವತವಾಗಿ ಕಟ್ಟಿದನು.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮುಂಚಿನ ಮೊಳದ ಪ್ರಕಾರ ಅರುವತ್ತು ಮೊಳ,


ಆಮೇಲೆ ಅವನು ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಆರಾರು ಮೊಳ, ದ್ವಾರದ ಅಗಲ ಹತ್ತು ಮೊಳ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು