Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:10 - ಕನ್ನಡ ಸತ್ಯವೇದವು J.V. (BSI)

10 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸಂಬಂಧಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು 2:2 ಮೀಟರುಗಳಂತೆ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಹೊಂದಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೊಲೊಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಈ ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು 2.2 ಮೀಟರ್ ಎತ್ತರವಾದ ಕೊಠಡಿಗಳನ್ನು ಆಲಯದ ಬಳಿಯಲ್ಲಿ ಸುತ್ತಲು ಕಟ್ಟಿಸಿದನು. ಅವು ಆಲಯದ ಮೇಲೆ ಇರಿಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:10
7 ತಿಳಿವುಗಳ ಹೋಲಿಕೆ  

ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ ದೇವದಾರಿನ ತೊಲೆಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ತೀರಿಸಿದನು.


ಯೆಹೋವನು ಸೊಲೊಮೋನನಿಗೆ - ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುತ್ತೀಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವದಾದರೆ ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನಮ್ಮ ಮನೆಯ ತೊಲೆಗಳು ದೇವದಾರು ವೃಕ್ಷಗಳು, ಜಂತೆಗಳು ತುರಾಯಿ ಮರಗಳು.


ಆ ಕೊಠಡಿಗಳು ಒಂದರ ಮೇಲೊಂದು ಮೂರಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತಿದ್ದವು; ದೇವಸ್ಥಾನದ ಗೋಡೆಯು ಮೆಟ್ಲು ಮೆಟ್ಲಾಗಿ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಅಧಾರವಾಗಿದ್ದವು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕೊಟ್ಟಾರಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು ಕೃಪಾಸನಮಂದಿರ ಇವುಗಳ ನಕ್ಷೆಯನ್ನು ಕೊಟ್ಟು


ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು