1 ಅರಸುಗಳು 6:27 - ಕನ್ನಡ ಸತ್ಯವೇದವು J.V. (BSI)27 ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನು ಅವುಗಳನ್ನು ದೇವಾಲಯದ ಗರ್ಭಗುಡಿಯಲ್ಲಿರಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆ ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆ ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ಕೆರೂಬಿಗಳನ್ನು ದೇವಾಲಯದ ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವುದರಿಂದ ಒಂದು ರೆಕ್ಕೆಯ ಈ ಭಾಗದ ಗೋಡೆಯನ್ನೂ, ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು. ಆಲಯದ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು. ಅಧ್ಯಾಯವನ್ನು ನೋಡಿ |