Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:37 - ಕನ್ನಡ ಸತ್ಯವೇದವು J.V. (BSI)

37 ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ವರ್ಷದ ಎರಡನೆಯ ತಿಂಗಳಿನ ಜೀವ್ (ವೈಶಾಖ) ಮಾಸದಲ್ಲಿ ದೇವಾಲಯವನ್ನು ಕಟ್ಟಲಾರಂಭಿಸಿದರು. ಇಸ್ರೇಲನ್ನು ಸೊಲೊಮೋನನು ಆಳಲು ಆರಂಭಿಸಿದ ನಾಲ್ಕನೆಯ ವರ್ಷದಲ್ಲಿ ಇದು ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಾಲ್ಕನೆಯ ವರ್ಷದ ಜಿವ್ ತಿಂಗಳಲ್ಲಿ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:37
6 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.


ಸೊಲೊಮೋನನು ತನ್ನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಕಟ್ಟಿಸುವದಕ್ಕೆ ಪ್ರಾರಂಭಿಸಿದನು.


ಹನ್ನೊಂದನೆಯ ವರುಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವದಕ್ಕೆ ಏಳು ವರುಷ ಹಿಡಿಯಿತು.


ಅರಸನಾದ ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ನಂತರ


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಸಿದನಂತರ


ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಯೆಹೋವನ ಆಲಯವು ಸಿದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು