Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:4 - ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಳಂಧರ ಕಿಟಕಿಗಳನ್ನಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಲರಿಗಳುಳ್ಳ ಕಿಟಿಕಿಗಳನ್ನಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ, ಅವನು ಆಲಯಕ್ಕೆ ತೆರೆಯಲಾಗದ ಜಾಲಂಧರ ಕಿಟಕಿಗಳನ್ನಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವಾಲಯದಲ್ಲಿ ಕಿರಿದಾದ ಕಿಟಿಕಿಗಳಿದ್ದವು. ಈ ಕಿಟಕಿಗಳು ಹೊರಗಡೆಯಲ್ಲಿ ಕಿರಿದಾಗಿಯೂ ಮತ್ತು ಒಳಗಡೆ ದೊಡ್ಡದಾಗಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಸಣ್ಣ ಜಾಲರಿಗಳುಳ್ಳ ಕಿಟಿಕಿಗಳನ್ನು ಆಲಯಕ್ಕೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:4
6 ತಿಳಿವುಗಳ ಹೋಲಿಕೆ  

ಗೋಡೇಕೋಣೆಗಳಲ್ಲಿಯೂ ಒಳಗಣ ಎರಡು ಕಡೆಯ ನಿಲವು ಕಂಬಗಳಲ್ಲಿಯೂ ಕೈಸಾಲೆಯಲ್ಲಿಯೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತುಮುತ್ತಲಿದ್ದವು; [ಹೊರಗಣ] ನಿಲವುಕಂಬಗಳಲ್ಲಿ ಖರ್ಜೂರವೃಕ್ಷಗಳು ಚಿತ್ರಿತವಾಗಿದ್ದವು.


ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ [ಚಿತ್ರಿತ] ಖರ್ಜೂರ ವೃಕ್ಷಗಳೂ ಇದ್ದವು.


ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲ್ಪಟ್ಟ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು;


ಎನ್ನಿನಿಯನು ಜಿಂಕೆಯಂತೆಯೂ ಪ್ರಾಯದ ಎರಳೆಯ ಹಾಗೂ ಇದ್ದಾನೆ. ಆಹಾ, ನಮ್ಮ ಗೋಡೆಯ ಆಚೆ ನಿಂತಿದ್ದಾನೆ, ಕಿಟಕಿಗಳಲ್ಲಿ ನೋಡುತ್ತಾನೆ, ಜಾಲಾಂತರಗಳಲ್ಲಿ ಇಣಿಕುಹಾಕುತ್ತಾನೆ!


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದವು ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲವು ಹತ್ತು ಮೊಳ.


ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕು ಕಂಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು