Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:7 - ಕನ್ನಡ ಸತ್ಯವೇದವು J.V. (BSI)

7 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದ್ದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:7
14 ತಿಳಿವುಗಳ ಹೋಲಿಕೆ  

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನಿನ್ನ ಕೆಲಸದ ಸಾಮಾನುಗಳನ್ನು ಸುತ್ತಲು ಅಣಿಮಾಡು, ನಿವೇಶನದಲ್ಲಿ ಸಿದ್ಧಪಡಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.


ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು; ಅದಕ್ಕೆ ಉಳಿ ಮುಂತಾದದ್ದನ್ನು ಉಪಯೋಗಿಸಿದರೆ ಅದು ಅಪರಿಶುದ್ಧವಾಗುವದು.


ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.


ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಮಾಡಿರುವವನು ದೇವರೇ; ಆತನು ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಇವನು ಕೂಗಾಡುವದಿಲ್ಲ, ಆರ್ಭಟಿಸುವದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವದಿಲ್ಲ.


ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.


ಕೆಳಗಿನ ಕೊಠಡಿಗಳ ಅಗಲವು ಐದು ಮೊಳ; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲವು ಆರು ಮೊಳ; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದೆಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.


ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು