Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:8 - ಕನ್ನಡ ಸತ್ಯವೇದವು J.V. (BSI)

8 ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಧ್ಯ ಕೊಠಡಿಯ ಬಾಗಿಲು ಆಲಯದ ದಕ್ಷಿಣ ಭಾಗದಲ್ಲಿ ಇತ್ತು. ಅಲ್ಲಿಂದ ಮಧ್ಯ ಕೊಠಡಿಗೂ, ಮಧ್ಯ ಕೊಠಡಿಯಿಂದ ಮೂರನೆಯ ಕೊಠಡಿಗೂ ಹತ್ತಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:8
6 ತಿಳಿವುಗಳ ಹೋಲಿಕೆ  

ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ ದೇವದಾರಿನ ತೊಲೆಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ತೀರಿಸಿದನು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲಾಜ್ಞಾಪಿಸಿದನು. ಅವು ಸಿದ್ಧವಾದ ಮೇಲೆ


ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಡು.


ಕೋಣೆಗಳು ಮೂರಂತಸ್ತಾಗಿದ್ದವು; [ಹೊರಗಣ] ಪ್ರಾಕಾರದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಕೈಸಾಲೆಗಳಿರಲಿಲ್ಲ; ಆದದರಿಂದ ನೆಲಕ್ಕೆತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಣ ಮತ್ತು ನಡುವಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು