Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:18 - ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಅವನು ತಾಮ್ರದ ದಾಳಿಂಬಹಣ್ಣುಗಳನ್ನು ಮಾಡಿ ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ, ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇದಲ್ಲದೆ ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ ಅವುಗಳನ್ನು ಮಾಡಿದನು. ಈ ದಾಳಿಂಬೆಯ ಅಲಂಕರಣಗಳನ್ನು ಕಂಬಗಳ ಮೇಲಿನ ಬೋದಿಗೆ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸ್ತಂಭಗಳಿಗೆ ಇನ್ನೂ ಮಾಡಿದ್ದು ಹೇಗೆಂದರೆ, ಕೊನೆಯಲ್ಲಿರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬೆ ಹಣ್ಣುಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:18
8 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬಹಣ್ಣುಗಳೂ ಇದ್ದವು.


ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು.


ಅದಲ್ಲದೆ ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.


ಒಂದೊಂದಕ್ಕೆ ಏಳೇಳರಂತೆ ಕುಂಭದ ಮೇಲೆ ಹಾಕುವದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು;


ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.


ಎರಡು ಕಂಬಗಳು, ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು