Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:2 - ಕನ್ನಡ ಸತ್ಯವೇದವು J.V. (BSI)

2 ವರುಷಗಳಲ್ಲಿ ಕಟ್ಟಿಸಿ ತೀರಿಸಿದನು. ಅವನು ಕಟ್ಟಿಸಿದ ಲೇಬನೋನಿನ ತೋಪು ಎನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ, ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಆಧಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಕಟ್ಟಿಸಿದ ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರ 44 ಮೀಟರ್ ಉದ್ದ, 22 ಮೀಟರ್ ಅಗಲ, 13:5 ಮೀಟರ್ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳು ಅವುಗಳ ಮೇಲೆ ಇಡಲಾದ ದೇವದಾರಿನ ತೊಲೆಗಳೂ ಆಧಾರವಾಗಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು “ಲೆಬನೋನಿನ ಅರಣ್ಯದ ಮನೆ” ಎಂಬ ಕಟ್ಟಡವನ್ನೂ ಕಟ್ಟಿಸಿದನು. ಅದರ ಉದ್ದ ನೂರೈವತ್ತು ಅಡಿಗಳು; ಅಗಲ ಎಪ್ಪತ್ತೈದು ಅಡಿಗಳು; ಎತ್ತರ ನಲವತ್ತೈದು ಅಡಿಗಳು. ಅದರಲ್ಲಿ ನಾಲ್ಕು ಸಾಲಿನ ದೇವದಾರು ಮರದ ಕಂಬಗಳಿದ್ದವು ಆ ಕಂಬಗಳ ಮೇಲೆ ದೇವದಾರು ಮರದ ಬೋದಿಗೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಲೆಬನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು 44 ಮೀಟರ್ ಉದ್ದ, 22 ಮೀಟರ್ ಅಗಲ, 13.5 ಮೀಟರ್ ಎತ್ತರವೂ ಆಗಿತ್ತು. ಅದು ನಾಲ್ಕು ಸಾಲು ದೇವದಾರು ಕಂಬಗಳ ಮೇಲೆ ಇತ್ತು. ದೇವದಾರು ತೊಲೆಗಳು ಕಂಬಗಳ ಮೇಲೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:2
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.


ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು.


ನಿನ್ನ ಕಂಠವು ದಂತದ ಗೋಪುರ; ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್‍ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ನಾಸಿಕವು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನ ಹಾಗಿದೆ.


ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲವಾದದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ಯುದ್ಧರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು, ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.


ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಾಲ್ವತ್ತೈದು ಇದ್ದವು.


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಸಿದನಂತರ


ಯೆಹೂದದ ತೆರೆಯು ತೆರೆದುಹೋಯಿತು; ಆ ದಿನದಲ್ಲಿ [ಲೆಬನೋನಿನ] ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು