Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:21 - ಕನ್ನಡ ಸತ್ಯವೇದವು J.V. (BSI)

21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀರಾಮನು ಈ ಹಿತ್ತಾಳೆಯ ಕಂಬಗಳನ್ನು ದೇವಾಲಯದ ಮಂಟಪದಲ್ಲಿ ಇಟ್ಟನು. ಒಂದು ಸ್ತಂಭವನ್ನು ಪ್ರವೇಶದ್ವಾರದ ದಕ್ಷಿಣದಿಕ್ಕಿನ ಕಡೆಯಲ್ಲೂ ಮತ್ತೊಂದನ್ನು ಉತ್ತರದಿಕ್ಕಿನ ಕಡೆಯಲ್ಲೂ ಇಟ್ಟನು. ದಕ್ಷಿಣದ ಸ್ತಂಭಕ್ಕೆ ಯಾಕೀನ್ ಎಂದು ಹೆಸರಿಟ್ಟನು. ಉತ್ತರದ ಸ್ತಂಭಕ್ಕೆ ಬೋವಜ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಸ್ತಂಭಗಳನ್ನು ಮಂದಿರದ ಮಂಟಪದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:21
14 ತಿಳಿವುಗಳ ಹೋಲಿಕೆ  

ಆ ಕಂಬಗಳನ್ನು ದೇವಾಲಯದ ಮುಂಭಾಗದಲ್ಲಿ ಒಂದನ್ನು ಬಲಗಡೆಗೂ ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿ ಬಲಗಡೆಯದಕ್ಕೆ ಯಾಕೀನ್ ಎಂದೂ ಎಡಗಡೆಯದಕ್ಕೆ ಬೋವಜ್ ಎಂದೂ ಹೆಸರಿಟ್ಟನು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದವು ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲವು ಹತ್ತು ಮೊಳ.


ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಒಳಗಣ ಪ್ರಾಕಾರವೆನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರುವಿನ ಮರದ ಕಂಬಗಳೂ ಇದ್ದವು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;


ಅವನು ಕಂಬಗಳ ಮೇಲೆ ಕಮಲಾಲಂಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.


ಅತ್ತೆಯು - ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ ಎನ್ನಲು ರೂತಳು - ನಾನು ಯಾವನ ಹೊಲದಲ್ಲಿ ಹಕ್ಕಲಾಯ್ದೆನೋ ಅವನ ಹೆಸರು ಬೋವಜನೆಂದು ತಿಳಿಸಿದಳು.


ಕಂಬಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬದ ಹಣ್ಣುಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು