1 ಅರಸುಗಳು 7:23 - ಕನ್ನಡ ಸತ್ಯವೇದವು J.V. (BSI)23 ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು. ಅಧ್ಯಾಯವನ್ನು ನೋಡಿ |
ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.