Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:26 - ಕನ್ನಡ ಸತ್ಯವೇದವು J.V. (BSI)

26 ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬತ್ ನೀರನ್ನು ಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕೊಳದ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಸುಮಾರು ನಾಲ್ವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಈ ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪವಾಗಿತ್ತು. ಈ ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ಈ ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ನಾಲ್ವತ್ತು ನಾಲ್ಕು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:26
12 ತಿಳಿವುಗಳ ಹೋಲಿಕೆ  

ಅವುಗಳ ಹಿಂಭಾಗವು ಒಳಗಡೆಗಿತ್ತು. ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಮೂರು ಸಾವಿರ ಬತ್ ನೀರನ್ನು ಹಿಡಿಯುವದು.


ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);


ಕಂಬಗಳು ಎಂಥವುಗಳಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ಹೊಳ್ಳು, ನಾಲ್ಕು ಬೆರಳು ದಪ್ಪವಾಗಿತ್ತು.


ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.


ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.


ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆಯಿದ್ದಲ್ಲಿ ಆ ತಗಡನ್ನು ಬಡಿಸಿದನು.


ಚೌಕಟ್ಟು ಪಂಚಕೋಣಗಳುಳ್ಳದಾಗಿತ್ತು. ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.


ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.


ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.


ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರದಿಕ್ಕಿಗೂ ಮೂರು ಪಶ್ಚಿಮದಿಕ್ಕಿಗೂ ಮೂರು ದಕ್ಷಿಣದಿಕ್ಕಿಗೂ ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು; ಅವುಗಳ ಹಿಂಭಾಗವು ಒಳಗಡೆ ಇತ್ತು.


ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.


ಏಫಾ [ಎಂಬ ಧಾನ್ಯದ ಅಳತೆಯು] ಮತ್ತು ಬತ್ [ಎಂಬ ರಸದ್ರವ್ಯದ ಅಳತೆಯು] ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಏಫಾ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು