Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:31 - ಕನ್ನಡ ಸತ್ಯವೇದವು J.V. (BSI)

31 ಗಂಗಾಳವನ್ನು ಇಡುವದಕ್ಕೋಸ್ಕರ ಪೀಠದ ಮೇಲಿನ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚತುಷ್ಕೋಣದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ಬಾನೆಯನ್ನು ಇಡುವುದಕ್ಕಾಗಿ ಪೀಠದ ಮೇಲಿನ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿ ಇತ್ತು. ಚಕ್ರಾಕಾರವಾಗಿದ್ದ ಈ ಬಾಯಿಯು ಒಂದೂವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚತುಷ್ಕೋನದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಪಾತ್ರೆಯ ಮೇಲೆ ಒಂದು ಚೌಕಟ್ಟಿತ್ತು. ಅದು ಪಾತ್ರೆಯ ಮೇಲೆ ಹದಿನೆಂಟು ಇಂಚು ಎತ್ತರವಾಗಿತ್ತು. ಆ ಪಾತ್ರೆಯ ಬಾಯಿಯು ಇಪ್ಪತ್ತೇಳು ಇಂಚು ವ್ಯಾಸದೊಂದಿಗೆ ವೃತ್ತಾಕಾರವಾಗಿತ್ತು. ಆ ಚೌಕಟ್ಟಿನ ಹಿತ್ತಾಳೆಯ ಮೇಲೆ ಚಿತ್ರ ವಿನ್ಯಾಸಗಳನ್ನು ಬಿಡಿಸಲಾಗಿತ್ತು. ಈ ಚೌಕಟ್ಟು ವೃತ್ತಾಕಾರವಾಗಿರದೆ ಚೌಕಾಕಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅಂಚಿಗೆ ಒಳಗಾದ ಅದರ ಬಾಯಿ ಮೇಲೆ ಒಂದು ಮೊಳ ಉದ್ದವಾಗಿತ್ತು. ಚಕ್ರಾಕಾರವಾಗಿದ್ದ ಈ ಬಾಯಿ ಒಂದೂವರೆ ಮೊಳ ಅಗಲವಾಗಿತ್ತು. ಅದರ ಬಾಯಿಯ ಮೇಲೆ ಚಿತ್ರಗಳಿದ್ದವು. ಅದರ ಚಿತ್ರಗಳು ದುಂಡಾಗಿರದೆ ಚೌಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:31
2 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣಚಿತ್ರಗಳಿದ್ದವು.


ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ಇರಸೂ ಪೀಠವೂ ಅಖಂಡವಾಗಿದ್ದವು; ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು