Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:38 - ಕನ್ನಡ ಸತ್ಯವೇದವು J.V. (BSI)

38 ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:38
12 ತಿಳಿವುಗಳ ಹೋಲಿಕೆ  

ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ದೇವದರ್ಶನದ ಗುಡಾರದ ಬಾಗಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು.


ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು, ಗಂಗಾಳ,


ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.


ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು