Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:39 - ಕನ್ನಡ ಸತ್ಯವೇದವು J.V. (BSI)

39 ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಕಂಚಿನ ಕಡಲನ್ನು ದೇವಾಲಯದ ಬಲಗಡೆಯಲ್ಲಿ, ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹೀರಾಮನು ದೇವಾಲಯದ ದಕ್ಷಿಣದ ಕಡೆಗೆ ಐದು ಬಂಡಿಗಳನ್ನು ಮತ್ತು ಇತರ ಐದು ಬಂಡಿಗಳನ್ನು ಉತ್ತರದ ಕಡೆಗೆ ಇಟ್ಟನು. ಅವನು ಆ ದೊಡ್ಡ ಜಲಾಶಯವನ್ನು ದೇವಾಲಯದ ಆಗ್ನೇಯ ದಿಕ್ಕಿನಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಲಯದ ದಕ್ಷಿಣ ದಿಕ್ಕಿಗೆ ಐದು ಪೀಠಗಳನ್ನೂ, ಆಲಯದ ಉತ್ತರ ದಿಕ್ಕಿಗೆ ಐದು ಪೀಠಗಳನ್ನೂ ಇಟ್ಟನು. ಆದರೆ ಜಲಾಶಯವನ್ನು ಆಲಯದ ದಕ್ಷಿಣ ದಿಕ್ಕಿಗೆ ಅಂದರೆ ಆಲಯದ ಆಗ್ನೇಯ ಮೂಲೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:39
6 ತಿಳಿವುಗಳ ಹೋಲಿಕೆ  

ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು [ದೇವಾಲಯದ] ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.


ಇದಲ್ಲದೆ ಅವನು ಹತ್ತು ಗಂಗಾಳಗಳನ್ನು ಮಾಡಿಸಿ ಸರ್ವಾಂಗಹೋಮಸಮರ್ಪಣೆಯ ಸಾಮಾನು ತೊಳೆದು ಶುದ್ಧಮಾಡುವದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಸಮುದ್ರವೆನಿಸಿಕೊಳ್ಳುವ ಪಾತ್ರೆಯು ಯಾಜಕರ ಸ್ನಾನಕ್ಕಾಗಿ ಇತ್ತು.


ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಒಟ್ಟು ಸಾಮಾನುಗಳು ಯಾವವಂದರೆ -


ಮತ್ತು ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಮುಡುಪಾಗಿಟ್ಟ ಬೆಳ್ಳಿ ಬಂಗಾರವನ್ನೂ ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು