Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:45 - ಕನ್ನಡ ಸತ್ಯವೇದವು J.V. (BSI)

45 ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು. ರಾಜನಾದ ಸೊಲೊಮೋನನು ಅಪೇಕ್ಷಿಸಿದ ವಸ್ತುಗಳನ್ನೆಲ್ಲಾ ಹೀರಾಮನು ಮಾಡಿದನು. ಈ ವಸ್ತುಗಳನ್ನೆಲ್ಲಾ ನಯಗೊಳಿಸಿದ ಹಿತ್ತಾಳೆಯಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:45
9 ತಿಳಿವುಗಳ ಹೋಲಿಕೆ  

ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕೋಸ್ಕರ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿ ತೀರಿಸಿದನು.


ವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಗೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.


ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.


ಮತ್ತು ಮೋಶೆ ಆರೋನನಿಗೂ ಅವನ ಮಕ್ಕಳಿಗೂ ಹೀಗಂದನು - ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಬೇಯಿಸಿ ಅದನ್ನೂ ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನೂ ಅಲ್ಲೇ ಊಟಮಾಡಬೇಕು.


ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.


ಅವುಗಳ ತಾಮ್ರವನ್ನೂ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ ಸಲಿಕೆ ಕತ್ತರಿ ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು