Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:48 - ಕನ್ನಡ ಸತ್ಯವೇದವು J.V. (BSI)

48 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ :- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48-50 ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಸೊಲೊಮೋನನು ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಚಿನ್ನದ ಮೇಜೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:48
22 ತಿಳಿವುಗಳ ಹೋಲಿಕೆ  

ಹತ್ತು ಮೇಜುಗಳನ್ನು ಮಾಡಿಸಿ ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ ಎಡಗಡೆಯಲ್ಲಿ ಐದನ್ನೂ ಇಡಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಮೇಜು, ಅದರ ಎಲ್ಲಾ ಉಪಕರಣಗಳು, ನೈವೇದ್ಯದ ರೊಟ್ಟಿ ಇವುಗಳನ್ನೂ;


ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.


ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ ನನ್ನ ಸೇವೆಮಾಡುವದಕ್ಕೆ ನನ್ನ ವೇದಿಯನ್ನು ಸಮೀಪಿಸಿ ನನ್ನ [ಆಲಯದ] ಪಾರುಪತ್ಯವನ್ನು ವಹಿಸುವರು.


ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು.


ಇದಲ್ಲದೆ ಸರ್ವಾಂಗಹೋಮಕ್ಕೆ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು; ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದು ಮೊಳ; ಅವುಗಳ ಮೇಲೆ ಸರ್ವಾಂಗಹೋಮಪಶುಗಳ ವಧೆಯ ಉಪಕರಣಗಳನ್ನು ಇಡುತ್ತಿದ್ದರು.


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.


ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,


ಮತ್ತು ಯೆಹೋವನು ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು


ಚಿನ್ನದ ಧೂಪವೇದಿಯು, ಅಭಿಷೇಕತೈಲವು, ಸುವಾಸನೆಯುಳ್ಳ ಧೂಪವು ಇವುಗಳನ್ನೂ;


ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.


ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ಜೀರ್ಣೋದ್ಧಾರಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು


ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ಬೆಳ್ಳಿ ಸಿಕ್ಕುವ ಗಣಿಯೂ ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು