Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:7 - ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದುದರಿಂದ ಅದಕ್ಕೆ ನ್ಯಾಯಮಂದಿರ ಎಂದು ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಗೆಗಳಿಂದ ಹೊದಿಸಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ನ್ಯಾಯತೀರಿಸಲು ನ್ಯಾಯಾಸನದ ಮಂಟಪವನ್ನು ಮಾಡಿ, ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ದೇವದಾರುಗಳನ್ನು ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:7
8 ತಿಳಿವುಗಳ ಹೋಲಿಕೆ  

ರಾಜನು ನ್ಯಾಯಾಸನಾರೂಢನಾಗಿ ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದವು ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲವು ಹತ್ತು ಮೊಳ.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು