Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:13 - ಕನ್ನಡ ಸತ್ಯವೇದವು J.V. (BSI)

13 ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಜವಾಗಿಯೂ ಅತ್ಯದ್ಭುತವಾದ ಆಲಯವನ್ನು ನಿನಗಾಗಿ ನಿರ್ಮಿಸಿರುವೆನು. ಈ ಸ್ಥಳದಲ್ಲಿ ನೀನು ಶಾಶ್ವತವಾಗಿ ನೆಲೆಸಿರಬಹುದು” ಎಂದು ಪ್ರಾರ್ಥನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:13
18 ತಿಳಿವುಗಳ ಹೋಲಿಕೆ  

ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಸ್ಥಾಪಿಸುವಿ. ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಏರ್ಪಡಿಸಿಕೊಂಡಿರುವ ಸ್ಥಾನವಾಗಿಯೂ ಕರ್ತನೇ, ನೀನು ಸಿದ್ಧಪಡಿಸಿಕೊಂಡಿರುವ ಪವಿತ್ರಾಲಯವಾಗಿಯೂ ಇರುವಲ್ಲಿಗೆ ಅವರನ್ನು ಬರಮಾಡುವಿ.


ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.


ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆ ಮಾಡಿದನು.


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ.


ಆತನು ನನಗೆ - ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿರುವೆನು.


ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.


ನುಡಿಯುವಾತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಇದು ನನ್ನ ಸಿಂಹಾಸನ ಸ್ಥಾನ, ನನ್ನ ಪಾದಸನ್ನಿಧಿ; ಇಲ್ಲಿ ನಾನು ಇಸ್ರಾಯೇಲ್ಯರ ಮಧ್ಯೆ ಸದಾ ವಾಸಿಸುವೆನು; ಇಸ್ರಾಯೇಲ್‍ವಂಶದವರಾಗಲಿ ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ ಗತಿಸಿದ ಅರಸರ ಶವಗಳಿಂದಲೂ


ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು