Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:2 - ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಅಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಇಸ್ರೇಲಿನ ಜನರೆಲ್ಲರೂ ರಾಜನಾದ ಸೊಲೊಮೋನನ ಬಳಿಗೆ ಒಟ್ಟಾಗಿ ಬಂದರು. ಇದು ಏತನೀಮ್ ತಿಂಗಳಿನ (ಆಶ್ವೀಜ) ವಿಶೇಷ ದಿನದಂದು (ಪರ್ಣಶಾಲೆಗಳ ಹಬ್ಬ) ನಡೆಯಿತು. ಇದು ವರ್ಷದ ಏಳನೆಯ ತಿಂಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಥನಿಮ ತಿಂಗಳಲ್ಲಿ ಹಬ್ಬವಿದ್ದಾಗ, ಇಸ್ರಾಯೇಲಿನ ಸಮಸ್ತ ಜನರು ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:2
12 ತಿಳಿವುಗಳ ಹೋಲಿಕೆ  

ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.


ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ಸರ್ವಾಂಗಹೋಮಗಳನ್ನರ್ಪಿಸಿದರು.


ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗೋಸ್ಕರ ಅರಸನ ಬಳಿಗೆ ಕೂಡಿಬಂದರು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ ಬೇತೇಲಿನಲ್ಲಿ ಯೆಹೂದದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕೆಂದು ಅಪ್ಪಣೆಮಾಡಿ ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ವೇದಿಯ ಮೇಲೆ ಯಜ್ಞಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು