Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:25 - ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನ ಮಾಡಿದಿಯಲ್ಲಾ; ಅದನ್ನು ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಗಲಾದರೋ ಇಸ್ರೇಲಿನ ದೇವರಾದ ಯೆಹೋವನೇ, ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಾಡಿದ ಇತರ ವಾಗ್ದಾನಗಳನ್ನು ಈಗ ನೆರವೇರಿಸು. ನೀನು ನನ್ನ ತಂದೆಗೆ, ‘ದಾವೀದನೇ, ನೀನು ನನ್ನನ್ನು ಅನುಸರಿಸಿದಂತೆ ನಿನ್ನ ಮಕ್ಕಳೂ ಎಚ್ಚರಿಕೆಯಿಂದ ನನ್ನನ್ನು ಅನುಸರಿಸಿದರೆ, ನಿನ್ನ ಕುಟುಂಬದಲ್ಲಿನ ಯಾವನಾದರೊಬ್ಬನು ಇಸ್ರೇಲಿನ ಜನರನ್ನು ಆಳುತ್ತಲೇ ಇರುವನು’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿನ್ನ ಸಂತಾನದವರು ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:25
12 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಕೈಕೊಂಡಿ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿತು.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವದಾದರೆ ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕೂತುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು