1 ಅರಸುಗಳು 8:36 - ಕನ್ನಡ ಸತ್ಯವೇದವು J.V. (BSI)36 ಪರಲೋಕದಲ್ಲಿರುವ ನೀನು ಲಾಲಿಸಿ ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲ್ಯರ ಪಾಪಗಳನ್ನು ಕ್ಷವಿುಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ ನಿನ್ನ ಪ್ರಜೆಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಗ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ಆಲಿಸು; ಅವರ ಪಾಪಗಳನ್ನು ಕ್ಷಮಿಸು; ನೀತಿಮಾರ್ಗವನ್ನು ಅವರಿಗೆ ಕಲಿಸು. ಬಳಿಕ ನೀನು ಅವರಿಗೆ ದಯಪಾಲಿಸಿದ ಭೂಮಿಯ ಮೇಲೆ ಮಳೆಯನ್ನು ಸುರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ. ಅಧ್ಯಾಯವನ್ನು ನೋಡಿ |