Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:38 - ಕನ್ನಡ ಸತ್ಯವೇದವು J.V. (BSI)

38 ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:38
25 ತಿಳಿವುಗಳ ಹೋಲಿಕೆ  

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು -


ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು; ಅವನ ಆನಂದದಲ್ಲಿಯೂ ಯಾರೂ ಪಾಲುಗಾರರಾಗುವದಿಲ್ಲ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಾನು ನನ್ನ ಶರಣನಿಗೆ - ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು ಎಂದು ಮೊರೆಯಿಡುವೆನು.


ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೊನ್ ಪರ್ವತ, ವಿುಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲೊಬ್ಬನಾಗಲಿ ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿವಿುತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.


ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.


ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು