Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:46 - ಕನ್ನಡ ಸತ್ಯವೇದವು J.V. (BSI)

46 ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 “ನಿನ್ನ ಜನರು ನಿನ್ನ ವಿರುದ್ಧ ಪಾಪ ಮಾಡುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯೂ ಪಾಪಮಾಡುತ್ತಾನೆಂಬುದು ನನಗೆ ತಿಳಿದಿದೆ. ನಿನ್ನ ಜನರ ಬಗ್ಗೆ ನೀನು ಕೋಪದಿಂದಿರುವೆ. ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಮಾಡುವೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಕೆಲವು ದೂರದೇಶಗಳಿಗೆ ಸಾಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:46
29 ತಿಳಿವುಗಳ ಹೋಲಿಕೆ  

ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.


ನನ್ನ ಹೃದಯವನ್ನು ಶುದ್ಧಮಾಡಿಕೊಂಡಿದ್ದೇನೆ; ನನ್ನ ಪಾಪವನ್ನು ಕಳೆದುಕೊಂಡು ನಿರ್ಮಲನಾಗಿದ್ದೇನೆ ಎಂದು ಯಾರು ಹೇಳಬಲ್ಲರು?


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು?


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಅವರು ಈ ಪ್ರಕಾರ ನಡೆದದರಿಂದ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಯೆಹೂದಕುಲದವರ ಹೊರತು ಉಳಿದ ಎಲ್ಲಾ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು; ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ಪರಲೋಕದಲ್ಲಿರುವ ನೀನು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರ ನ್ಯಾಯವನ್ನು ಸ್ಥಾಪಿಸು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು