Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:5 - ಕನ್ನಡ ಸತ್ಯವೇದವು J.V. (BSI)

5 ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೇ ಅಸಂಖ್ಯವಾದ ಕುರಿದನಗಳನ್ನು ಬಲಿದಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ಒಟ್ಟಿಗೆ ಸೇರಿದರು. ಅವರು ಅಸಂಖ್ಯವಾದ ಕುರಿಗಳನ್ನು ಮತ್ತು ದನಗಳನ್ನು ಯಜ್ಞಗಳನ್ನಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅರಸನಾದ ಸೊಲೊಮೋನನೂ, ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:5
6 ತಿಳಿವುಗಳ ಹೋಲಿಕೆ  

ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ ಬೇತೇಲಿನಲ್ಲಿ ಯೆಹೂದದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕೆಂದು ಅಪ್ಪಣೆಮಾಡಿ ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ವೇದಿಯ ಮೇಲೆ ಯಜ್ಞಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇವಿುಸಿದನು.


ಸೊಲೊಮೋನನು ದೇವದರ್ಶನದ ಗುಡಾರದ ಬಳಿಯಲ್ಲಿ ಯೆಹೋವನ ಮುಂದಿದ್ದ ಆ ತಾಮ್ರವೇದಿಯ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.


ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಭ್ರಮೆಗೊಂಡಿವೆ, ಕುರಿಯ ಹಿಂಡುಗಳು ದಂಡನೆಗೆ ಗುರಿಯಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು