Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:57 - ಕನ್ನಡ ಸತ್ಯವೇದವು J.V. (BSI)

57 ನಮ್ಮ ದೇವರಾದ ಯೆಹೋವನು ನಮ್ಮ ಪಿತೃಗಳ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ; ಆತನು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ನಮ್ಮ ದೇವರಾದ ಯೆಹೋವನು ನಮ್ಮೊಂದಿಗಿರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮ ಪೂರ್ವಿಕರ ಜೊತೆಯಲ್ಲಿದ್ದಂತೆ ನಮ್ಮ ಜೊತೆಯಲ್ಲಿಯೂ ಇರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮನ್ನು ಎಂದಿಗೂ ಬಿಟ್ಟುಹೋಗಕೂಡದೆಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಕೈಬಿಡದೆ, ನಮ್ಮನ್ನು ತ್ಯಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದರೋ ಹಾಗೆಯೇ ನಮ್ಮ ಸಂಗಡ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:57
17 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ಆಗ ಯೆಹೋಶುವನು ಅವರಿಗೆ - ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದು ಹಾಕಿ ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು