Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:59 - ಕನ್ನಡ ಸತ್ಯವೇದವು J.V. (BSI)

59 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ನಾನು ಈಗ ನಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಅವರ ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ನನ್ನ ಈ ಪ್ರಾರ್ಥನೆಯನ್ನು ಮತ್ತು ನಾನು ಕೇಳಿಕೊಂಡವುಗಳನ್ನು ನಮ್ಮ ದೇವರಾದ ಯೆಹೋವನು ಸದಾ ಜ್ಞಾಪಿಸಿಕೊಳ್ಳಲಿ. ಯೆಹೋವನು ತನ್ನ ಸೇವಕನಾದ ರಾಜನಿಗೋಸ್ಕರವಾಗಿಯೂ ತನ್ನ ಜನರಾದ ಇಸ್ರೇಲರಿಗೋಸ್ಕರವಾಗಿಯೂ ಇವುಗಳನ್ನು ಈ ಹೊತ್ತೇ ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59-60 ಇದಲ್ಲದೆ ಯೆಹೋವ ದೇವರು ತಾವೇ ದೇವರಾಗಿದ್ದಾರೆ. ಅವರ ಹೊರತು ಬೇರೊಬ್ಬರಿಲ್ಲವೆಂದು ಭೂಲೋಕದ ಜನರೆಲ್ಲರೂ ತಿಳಿಯುವ ಹಾಗೆ, ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತಮ್ಮ ಸೇವಕನ ನ್ಯಾಯವನ್ನೂ, ತಮ್ಮ ಜನರಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ, ನಾನು ಯೆಹೋವ ದೇವರ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು, ರಾತ್ರಿ ಹಗಲು ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:59
11 ತಿಳಿವುಗಳ ಹೋಲಿಕೆ  

ನಾನು ಇವರಿಗೋಸ್ಕರ ಕೇಳಿಕೊಳ್ಳುತ್ತೇನೆ; ಲೋಕಕ್ಕೋಸ್ಕರ ಕೇಳಿಕೊಳ್ಳದೆ ನೀನು ನನಗೆ ಕೊಟ್ಟವರಿಗೋಸ್ಕರವೇ ಕೇಳಿಕೊಳ್ಳುತ್ತೇನೆ; ನಿನ್ನವರಾಗಿದ್ದಾರೆ.


ನನ್ನ ಪ್ರಾರ್ಥನೆಯು ಧೂಪದಂತೆಯೂ ನಾನು ಕೈಯೆತ್ತುವದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.


ನಿಮ್ಮ ಕೋಟೆಯ ಬಾಗಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರುವವು; ನೀವು ಇರುವವರೆಗೂ ನಿಮಗೆ ಬಲವು ಇರುವದು.


ನಾವು ನಮ್ಮ ಪಿತೃಗಳಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ.


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬದನ್ನು ತಿಳಿದುಕೊಳ್ಳುವಂತೆ ಆತನು ಅವಶ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲ್ಯರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಯೆಹೋವನಾದ ನಾನು ತೋಟಗಾರನು, ಕ್ಷಣಕ್ಷಣವೂ ನೀರು ಹೊಯ್ಯುತ್ತಿದ್ದೇನೆ; ಯಾರೂ ಮುಟ್ಟದ ಹಾಗೆ ಹಗಲಿರುಳೂ ಕಾಯುತ್ತೇನೆ.


ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು