Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:60 - ಕನ್ನಡ ಸತ್ಯವೇದವು J.V. (BSI)

60 ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬದನ್ನು ತಿಳಿದುಕೊಳ್ಳುವಂತೆ ಆತನು ಅವಶ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲ್ಯರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:60
17 ತಿಳಿವುಗಳ ಹೋಲಿಕೆ  

ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಲ್ಪಟ್ಟಿತು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;


ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಭೂವಿುಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿದ್ದೇನೆಂತಲೂ ಅದ್ವಿತೀಯನಾದ ನಾನೇ ನಿಮ್ಮ ದೇವರಾದ ಯೆಹೋವನಾಗಿದ್ದೇನೆಂತಲೂ ನಿಮಗೆ ನಿಶ್ಚಯವಾಗುವದು; ನನ್ನ ಜನರು ಎಂದಿಗೂ ಆಶಾಭಂಗಪಡರು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.


ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು