Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:63 - ಕನ್ನಡ ಸತ್ಯವೇದವು J.V. (BSI)

63 ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:63
19 ತಿಳಿವುಗಳ ಹೋಲಿಕೆ  

ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು.


ಯೆಹೋವನಿಗೋಸ್ಕರ ಆ ದಿವಸ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಯಜ್ಞ ಮಾಡಿದರು.


ಆ ಕಾಲದಲ್ಲಿ ದೇವಾಲಯಪ್ರತಿಷ್ಠೆಯ ಹಬ್ಬವು ಯೆರೂಸಲೇವಿುನಲ್ಲಿ ನಡೆಯಿತು; ಆಗ ಚಳಿಕಾಲವಾಗಿತ್ತು.


ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.


ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿವಸ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲ್ಯರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ


ಅರಸನೂ ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.


ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರುಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇವಿುಗೆ ಬಂದು ಸೇರುವ ಹಿಂಡಿನ ಹಾಗೆ ಮನುಷ್ಯರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವದಕ್ಕೆ ಅವಕಾಶಕೊಡದೆ ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು