Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:65 - ಕನ್ನಡ ಸತ್ಯವೇದವು J.V. (BSI)

65 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:65
29 ತಿಳಿವುಗಳ ಹೋಲಿಕೆ  

ಅಲ್ಲಿಂದ ಅದು ಹಚರದ್ದಾರ್, ಅಚ್ಮೋನ್ ಎಂಬ ಊರುಗಳ ಮೇಲೆ ಐಗುಪ್ತದೇಶದ ಮುಂದಿರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.


ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.


ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‍ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ,


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.


ಯೆಹೂದದ ಅರಸನಾದ ಹಿಜ್ಕೀಯನು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಪ್ರಭುಗಳು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ತಮಗೆ ಯಜ್ಞಕ್ಕಾಗಿ ದಾನಮಾಡಿದ್ದರಿಂದಲೂ ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿದ್ದರಿಂದಲೂ


ಹೀಗೆ ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿ ಕೂಡಿದರು; ಆ ಕೂಟವು ಮಹಾಸಮೂಹವಾಗಿತ್ತು.


ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.


ಅಚ್ಮೋನಿನ ಮೇಲೆ ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರದಲ್ಲಿ ಮುಗಿಯುವದು. ಇದು ಅದರ ತೆಂಕಣ ಮೇರೆ.


ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್,


ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇವಿುಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿ ತನ್ನ ಎಲ್ಲಾ ಸೇವಕರಿಗೋಸ್ಕರ ಔತಣಮಾಡಿಸಿದನು.


ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಆಗ ದಾವೀದನು ದೇವಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತರುವದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯವರೆಗೂ ವಾಸಿಸುತ್ತಿದ್ದ ಎಲ್ಲಾ ಇಸ್ರಾಯೇಲ್ಯರನ್ನೂ ಕೂಡಿಸಿ


ತೆಂಕಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ [ಐಗುಪ್ತದ ಮುಂದಿರುವ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ತೆಂಕಣ ಮೇರೆಯು.


ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?


ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು.


ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು.


ಇಸ್ರಾಯೇಲ್ಯರೇ, ತುಂಬಿತುಳುಕುವ [ಯೂಫ್ರೇಟೀಸ್] ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿನ್ನನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು