Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:8 - ಕನ್ನಡ ಸತ್ಯವೇದವು J.V. (BSI)

8 ಆ ಕೋಲುಗಳು ಬಹಳ ಉದ್ದವಾಗಿದ್ದದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಹೊರುವ ಕೋಲುಗಳು ಬಹಳ ಉದ್ದವಾಗಿದ್ದವು. ಮಹಾ ಪವಿತ್ರಸ್ಥಳದ ಎದುರಿನ ಪವಿತ್ರಸ್ಥಳದಲ್ಲಿ ನಿಂತುಕೊಳ್ಳುವ ಯಾವ ವ್ಯಕ್ತಿಯೇ ಆಗಲಿ ಈ ಕೋಲುಗಳ ತುದಿಯನ್ನು ಕಾಣಬಹುದಾಗಿತ್ತು. ಆದರೆ ಹೊರಗಿರುವ ಯಾರೂ ಅವುಗಳನ್ನು ನೋಡುವುದಕ್ಕಾಗುವುದಿಲ್ಲ. ಈ ಕೋಲುಗಳು ಇಂದಿಗೂ ಅಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:8
7 ತಿಳಿವುಗಳ ಹೋಲಿಕೆ  

ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ.


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು


ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು