Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:1 - ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಸಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ಸರ್ವೇಶ್ವರನ ಆಲಯವನ್ನು, ತನ್ನ ಅರಮನೆಯನ್ನು ಹಾಗು ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ತಾನು ಬಯಸಿದ್ದೆಲ್ಲವನ್ನೂ ಸಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:1
18 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿದ್ದದನ್ನೆಲ್ಲಾ ಕೊನೆಗಾಣಿಸಿದ ನಂತರ


ಯುದ್ಧರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು, ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.


ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.


ಮತ್ತು ವಿಶೇಷ ಕಾರ್ಯಗಳನ್ನು ನಡಿಸಿದೆನು; ಮನೆಗಳನ್ನು ಕಟ್ಟಿಸಿಕೊಂಡೆನು,


ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.


ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.


ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು


ವರುಷಗಳಲ್ಲಿ ಕಟ್ಟಿಸಿ ತೀರಿಸಿದನು. ಅವನು ಕಟ್ಟಿಸಿದ ಲೇಬನೋನಿನ ತೋಪು ಎನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ, ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಆಧಾರವಾಗಿದ್ದವು.


ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.


ಅರಸನಾದ ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ನಂತರ


ಬಾಲಾತೂರು, ತನ್ನ ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಮತ್ತು ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.


ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ ಯೆಹೋವನ ಆಲಯವನ್ನೂ ಯೆರೂಸಲೇವಿುನ ಸುತ್ತಣ ಗೋಡೆಯನ್ನೂ ಕಟ್ಟಿ ತೀರಿಸುವ ತನಕ ಆಕೆಯನ್ನು ದಾವೀದನ ನಗರದಲ್ಲಿ ಇರಿಸಿದನು.


ಸೊಲೊಮೋನನು ಪ್ರಾರ್ಥಿಸುವದನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿಬಿದ್ದು ಸರ್ವಾಂಗ ಹೋಮದ್ರವ್ಯಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು, ಯೆಹೋವನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.


ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು