1 ಅರಸುಗಳು 9:19 - ಕನ್ನಡ ಸತ್ಯವೇದವು J.V. (BSI)19 ಯುದ್ಧರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು, ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು. ಅಧ್ಯಾಯವನ್ನು ನೋಡಿ |