Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:3 - ಕನ್ನಡ ಸತ್ಯವೇದವು J.V. (BSI)

3 ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:3
30 ತಿಳಿವುಗಳ ಹೋಲಿಕೆ  

ಮತ್ತು ನಾವು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಧೈರ್ಯವು ಆತನ ವಿಷಯವಾಗಿ ನಮಗುಂಟು.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.


ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.


ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.


ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವವನು.


ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.


ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.


ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.


ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.


ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕಾಗಿ ಆದುಕೊಂಡ ಸ್ಥಳವು ನಿಮಗೆ ದೂರವಾದರೆ ಆತನು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ


ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು;


ಮತ್ತು ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವದಕ್ಕೂ ಯೆರೂಸಲೇವಿುನ ದೇವಾಲಯವನ್ನು ನಾಶಮಾಡುವದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ಕೆಡವಿಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಆಲಸ್ಯವಿಲ್ಲದೆ ಕೈಕೊಳ್ಳಬೇಕು ಎಂಬದೇ.


ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು; ಆರೋನನನ್ನೂ ಅವನ ಮಕ್ಕಳನ್ನೂ ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ನಮಗೆ ಪರಿಹಾರವಾಯಿತು ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡಿಸುವದಕ್ಕೆ ಅವಕಾಶ ಮಾಡಿಕೊಳ್ಳುವಿರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು