1 ಅರಸುಗಳು 9:5 - ಕನ್ನಡ ಸತ್ಯವೇದವು J.V. (BSI)5 ಇಸ್ರಾಯೇಲ್ಯರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು; ಇಸ್ರಾಯೇಲ್‍ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕೂತುಕೊಳ್ಳುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲವೆಂದು ನಾನು ನಿನ್ನ ತಂದೆ ದಾವೀದನಿಗೆ ಮಾತುಕೊಟ್ಟ ಪ್ರಕಾರ, ‘ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.’ ಅಧ್ಯಾಯವನ್ನು ನೋಡಿ |