Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:7 - ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಾಯೇಲ್ಯರು ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ ಆಸ್ಪದರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:7
38 ತಿಳಿವುಗಳ ಹೋಲಿಕೆ  

ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದ ಮಾಡಿದ್ದೀ; ಅವರು ನಮ್ಮನ್ನು ನೋಡಿ ತಲೆ ಆಡಿಸುತ್ತಾರೆ.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


[ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು.


ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು.


ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿ ಬಿಟ್ಟದೆ.


ಅನ್ಯದೇವತೆಗಳನ್ನು ಸೇವಿಸಲೇ ಬಾರದೆಂದು ಆಜ್ಞಾಪಿಸಿದ್ದರೂ ಅವನು ಆತನ ಆಜ್ಞೆಗಳನ್ನು ಮೀರಿದ್ದರಿಂದ ಆತನು ಅವನ ಮೇಲೆ ಕೋಪಗೊಂಡು


ನಾನು ಗೋಣೀತಟ್ಟು ಕಟ್ಟಿಕೊಂಡದ್ದು ಅವರ ಗಾದೆಗೆ ಆಸ್ಪದವಾಯಿತು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ದೂಷಕರ ನಿಂದಾವಚನಗಳಿಂದಲೂ ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ


ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ತಿನ್ನುವ ಆಹಾರವು ಹೊಲಸಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು