1 ಅರಸುಗಳು 9:9 - ಕನ್ನಡ ಸತ್ಯವೇದವು J.V. (BSI)9 ಆಗ ಅವರಿಗೆ - ಈ ದೇಶದವರು ತಮ್ಮ ಪಿತೃಗಳನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ ಎಂಬ ಉತ್ತರವು ಸಿಕ್ಕುವದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು. ಅಧ್ಯಾಯವನ್ನು ನೋಡಿ |