Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:10 - ಕನ್ನಡ ಸತ್ಯವೇದವು J.V. (BSI)

10 ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಭಾವಾನು ಅನಿ ಭೆನಿಯಾನು ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ; ತುಮಿ ಎಕುಚ್ ಮನಾಚೆ ಹೊವ್ನ್ ರ್‍ಹಾವ್ಚೆ ತುಮ್ಚ್ಯಾ ಮದ್ದಿ ಭಾಗ್ ರ್‍ಹಾವ್ಚೆ ನ್ಹಯ್, ತುಮಿ ಸಗ್ಳೆ ಜಾನಾ ಎಕುಚ್ ಮನಾಚೆ ಅನಿ ಎಕುಚ್ ಚಿಂತಾಪಾಚೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:10
44 ತಿಳಿವುಗಳ ಹೋಲಿಕೆ  

ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಆದದರಿಂದ ನನ್ನನ್ನು ಅನುಸರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಲಕ್ಷಿಸಿ ಅವರ ಕೆಲಸದ ನಿವಿುತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಈ ಮಾತುಗಳ ದೆಸೆಯಿಂದ ಯೆಹೂದ್ಯರಲ್ಲಿ ತಿರಿಗಿ ಭೇದವಾಯಿತು.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಆದರೆ ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ಹೀಗೆ ಜನರಲ್ಲಿ ಆತನನ್ನು ಕುರಿತು ಭೇದ ಉಂಟಾಯಿತು.


ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ; ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.


[ಹಚ್ಚಿದರೆ] ಆ ತ್ಯಾಪೆಯು ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.


ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ -


ಸಹೋದರರೇ, ನಾನು ನಿಮ್ಮ ಹಾಗೆ ಆದದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯಮಾಡಲಿಲ್ಲ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲೀಯವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿವಿುತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿವಿುತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.


ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ಯಾಕಂದರೆ ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದು ಬಂತು.


ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು