1 ಕೊರಿಂಥದವರಿಗೆ 1:12 - ಕನ್ನಡ ಸತ್ಯವೇದವು J.V. (BSI)12 ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆ ಕಶೆ ಕಾಯ್ ಮಟ್ಲ್ಯಾರ್; ತುಮ್ಚ್ಯಾತ್ಲೊ ಎಕ್ಲೊ ಅಪ್ನಿ ಪಾವ್ಲುಚೊ, ಅನಿ ಎಕ್ಲೊ, ಅಪೊಲ್ಲೊಚೊ, ಅನಿ ತಿನ್ವೆಚೊ, ಅಪ್ನಿ ಪೆದ್ರುಚೊ; “ಅನಿ ಚಾರ್‍ವೆಚೊ ಅಪ್ನಿ ಕೆಫಾಸಾಚೊ ನಾತರ್ ಕ್ರಿಸ್ತಾಚೊ” ಮನುನ್ ಮನ್ತಾ ಮನಿ. ಅಧ್ಯಾಯವನ್ನು ನೋಡಿ |
ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.