Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:13 - ಕನ್ನಡ ಸತ್ಯವೇದವು J.V. (BSI)

13 ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕ್ರಿಸ್ತಯೇಸು ಭಾಗಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕ್ರಿಸ್ತಾಚೆ ಕಾಯ್ ವಾಟೆ ಹೊಲ್ಲೆ ಹಾತ್ ಕಾಯ್? ನಾಹೊಲ್ಯಾರ್, ತುಮ್ಚ್ಯಾಸಾಟ್ನಿ ಮನುನ್ ಪಾವ್ಲುಕ್ ಕುರ್ಸಾರ್ ಮಾರಲ್ಲ್ಯಾನಿ ಕಾಯ್? ನಾಹೊಲ್ಯಾರ್ ಪಾವ್ಲುಚ್ಯಾ ನಾವಾನ್ ತುಮ್ಕಾ ಬಾಲ್ತಿಮ್ ದಿಲ್ಲೆ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:13
15 ತಿಳಿವುಗಳ ಹೋಲಿಕೆ  

ಒಂದೇ ಪದವಿಯನ್ನು ನಿರೀಕ್ಷಿಸುವದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ಭರವಸವು ಒಂದೇ, ಸ್ನಾನದೀಕ್ಷೆ ಒಂದೇ.


ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಅವರೆಲ್ಲರೂ ಸಮುದ್ರವನ್ನು ದಾಟಿಹೋದರು; ಅವರೆಲ್ಲರೂ ಮೋಶೆಯ ಶಿಷ್ಯರಾಗುವದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.


ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಅವರಿಗೆ - ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆಮೇಲೆ ಅವರು ಅವನನ್ನು - ಇನ್ನೂ ಕೆಲವು ದಿವಸ ಇರಬೇಕೆಂದು ಬೇಡಿಕೊಂಡರು.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು.


ಯಾಕಂದರೆ ಆ ವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು.


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು