1 ಕೊರಿಂಥದವರಿಗೆ 1:14 - ಕನ್ನಡ ಸತ್ಯವೇದವು J.V. (BSI)14-15 ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನಮಾಡಿಸಲಿಲ್ಲವಾದದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೆಂದು ಯಾರೂ ಹೇಳಲಾಗದು. ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸದ್ಯ! ಕ್ರಿಸ್ಪನು ಮತ್ತು ಗಾಯನು ಇವರಿಬ್ಬರನ್ನು ಬಿಟ್ಟರೆ ನಿಮ್ಮ ಪೈಕಿ ಯಾರಿಗೂ ನಾನು ದೀಕ್ಷಾಸ್ನಾನವನ್ನು ಕೊಟ್ಟಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮಲ್ಲಿ ಕ್ರಿಸ್ಪನು ಮತ್ತು ಗಾಯನು ಇವರ ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಮಾಡಿಸಿಲ್ಲವಾದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತುಮ್ಚ್ಯಾತ್ಲ್ಯಾ ಕ್ರಿಸ್ಪಸಾಕ್ ಅನಿ ಗಾಯುಸಾಕ್ ಸೊಡುನ್ ಅನಿ ಕೊನಾಕ್‍ಬಿ ಮಿಯಾ ಬಾಲ್ತಿಮ್ ದಿವ್ಕ್ ನಾ, ಹೆಚ್ಯಾಸಾಟ್ನಿ ಮಿಯಾ ದೆವಾಕ್ ಧನ್ಯವಾದ್ ದಿತಾ. ಅಧ್ಯಾಯವನ್ನು ನೋಡಿ |
ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;