1 ಕೊರಿಂಥದವರಿಗೆ 1:19 - ಕನ್ನಡ ಸತ್ಯವೇದವು J.V. (BSI)19 ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಪವಿತ್ರ್ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್, ಸಗ್ಳೆ" ಗೊತ್ತ್ ಅಸಲ್ಲ್ಯಾಚೆ ಶಾನ್‍ಪಾನ್ ಮಿಯಾ ನಾಸ್ ಕರ್‍ತಾ ಅನಿ ಶಾನ್ಯಾಂಚೆ ಶಾನ್‍ಪಾನ್ ಮಿಯಾ ಕಾಯ್ಬಿ ನ್ಹಯ್ ಸರ್ಕೆ ಕರುನ್ ಟಾಕ್ತಾ; ಅಧ್ಯಾಯವನ್ನು ನೋಡಿ |
ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.