Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:24 - ಕನ್ನಡ ಸತ್ಯವೇದವು J.V. (BSI)

24 ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಖರೆ ದೆವಾನ್ ಎಚುನ್ ಕಾಡಲ್ಲ್ಯಾಕ್ನಿ, ಜುದೆವಾಕ್ನಿ ತಸೆಚ್ ಜುದೆವ್ ನ್ಹಯ್ ಹೊತ್ಲ್ಯಾಕ್ನಿ ಕ್ರಿಸ್ತುಚ್ ದೆವಾಚೆ ಬಳ್ ಅನಿ ದೆವಾಚೆ ಶಾನ್‍ಪಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:24
14 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.


ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು.


ಆದರೆ ಜ್ಞಾನವು ಸಕಲ ಜ್ಞಾನಾವಲಂಬಿಗಳ ಮೂಲಕ ಜ್ಞಾನವೇ ಎಂದು ಗೊತ್ತಾಗುವದು ಅಂದನು.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.


ಜ್ಞಾನವೆಂಬಾಕೆಯು ಕರೆಯುತ್ತಾಳೆ, ವಿವೇಕವೆಂಬ ಆಕೆಯೇ ದನಿಗೈಯುತ್ತಾಳೆ.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು