Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:28 - ಕನ್ನಡ ಸತ್ಯವೇದವು J.V. (BSI)

28-29 ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜಗ್ ಖಲೆ ಮಹತ್ವಾಚೆ ಮನುನ್ ಚಿಂತಾ ತೆ ನಾಸ್ ಕರುಸಾಟ್ನಿ ಜಗ್ ಖಲೆ ನಕ್ಕೊ ಮನುನ್ ಚಿಂತಾ ತೆ ದೆವಾನ್ ಎಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:28
19 ತಿಳಿವುಗಳ ಹೋಲಿಕೆ  

ಯಾವ ವಿಮರ್ಶೆಯೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.


ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.


ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು