Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:31 - ಕನ್ನಡ ಸತ್ಯವೇದವು J.V. (BSI)

31 ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಪವಿತ್ರ ಗ್ರಂಥವು ಹೇಳುವಂತೆ, “ಹೆಮ್ಮೆಪಡುವವನು ಪ್ರಭುವಿನಲ್ಲಿ ಮಾತ್ರ ಹೆಮ್ಮೆಪಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಪವಿತ್ರ ವೇದದಲ್ಲಿ ಬರೆದಿರುವಂತೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆಚ್ಯಾಸಾಟ್ನಿ ಪವಿತ್ರ್ ಪುಸ್ತಕಾತ್ “ಮೊಟೆಪಾನ್ ಬೊಲುಚೆ ಮನುನ್ ಹುಡಕ್ತಲೊ ಧನಿಯಾಚೆ ಮೊಟೆಪಾನ್ ಬೊಲುಂದಿತ್” ಮನುನ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:31
13 ತಿಳಿವುಗಳ ಹೋಲಿಕೆ  

ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ಬಿಡಿಸಿ ಕೂಡಿಸು; ಆಗ ನಿನ್ನ ಪರಿಶುದ್ಧನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.


ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವದು; ಇದನ್ನು ದೀನರು ಕೇಳಿ ಸಂತೋಷಿಸುವರು.


ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.


ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು